ಮೇಲುಕೋಟೆ ಚೆಲುವನಾರಾಯಣಸ್ವಾಮಿ ವೈರಮುಡಿ ಉತ್ಸವ;ಉತ್ಸವಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೇಲುಕೋಟೆ ಚೆಲುವನಾರಾಯಣಸ್ವಾಮಿ ವೈರಮುಡಿ ಉತ್ಸವ;ಉತ್ಸವಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ವಿಶ್ವವಿಖ್ಯಾತ ಮೇಲುಕೋಟೆ ಚೆಲುವ ನಾರಾಯಣಸ್ವಾಮಿ ವೈರಮುಡಿ ಉತ್ಸವ ನಿನ್ನೆ ಅದ್ಧೂರಿಯಾಗಿ ನೆರವೇರಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ಸವಕ್ಕೆ ಚಾಲನೆ ನೀಡಿದರು. ಇದಕ್ಕೂ ಮುನ್ನ ಚೆಲುವ ನಾರಾಯಣ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ, ಸಚಿವ ಕೆ. ನಾರಾಯಣ ಗೌಡ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ , ಸಂಸದೆ ಸುಮಲತಾ ಅಂಬರೀಷ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು . ಬಳಿಕ ಮುಖ್ಯಮಂತ್ರಿ, ಕೋವಿಡ್‌ನಿಂದಾಗಿ ಕಳೆದ ಎರಡು ವರ್ಷಗಳಿಂದ ವೈರಮುಡಿ ಬ್ರಹ್ಮೋತ್ಸವ ಸರಳವಾಗಿ ನಡೆದಿತ್ತು. ಈ ವರ್ಷ ವೈಭವ ಯುತವಾಗಿ ನಡೆಯುತ್ತಿದೆ. ಪ್ರವಾಸೋದ್ಯಮ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ಮೇಲುಕೋಟೆಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಮೈ ಶುಗರ್ ಕಾರ್ಖಾನೆ ಪುನರಾ ರಂಭಕ್ಕೂ ಈಗಾಗಲೇ ಯೋಜಿಸಲಾಗಿದೆ ಎಂದರು.