Chandrachooda Shiva Shankara Parvathi Raaga: Darbari Kaanada Tala: Aadi Tala Composer: Sri Purandara Dasaru Original Lyrics from Purandara Dasa Keerthana Malika Book(Kannada) ಚಂದ್ರಚೂಡ ಶಿವಶಂಕರ ಪಾರ್ವತಿ ರಮಣಾ ನಿನಗೆ ನಮೋ ನಮೋ || ಪ || ಸುಂದರ ಮೃಗಧರ ಪಿನಾಕ ಧನುಕರ ಗಂಗಾ ಶಿರ ಗಜಚರ್ಮಾಂಬರಧರ ನಮೋ ನಮೋ || ಅ ಪ || ನಂದಿವಾಹನಾನಂದದಿಂದ ಮೂಜಗದಿ ಮೆರವೆ ನೀನೇ ಕಂದರ್ಪನ ಕ್ರೋಧದಿಂದ ಕಣ್ತೆರೆದು ಕೊಂದ ಉಗ್ರನು ನೀನೇ ಅಂದು ಅಮೃತ ಘಟದಿಂದುದಿಸಿದ ವಿಷ ತಂದು ಭುಜಿಸಿದವ ನೀನೇ ಇಂದಿರೇಶ ಶ್ರೀ ರಾಮನ ಪಾದವ ಚಂದದಿ ಪೊಗಳುವ ನೀನೇ || 1 || ಧರೆಗೆ ದಕ್ಷಿಣ ಕಾವೇರಿತೀರ ಕುಂಭಪುರವಾಸನು ನೀನೇ ಕರದಲಿ ವೀಣೆಯ ನುಡಿಸುವ ನಮ್ಮ ಉರಗಭೂಷಣನು ನೀನೇ ಕೊರಳೋಳು ಭಸ್ಮ ರುದ್ರಾಕ್ಷಿಯ ಧರಿಸಿದ ಪರಮ ವೈಷ್ಣವ ನೀನೆ ಗರುಡಗಮನ ಶ್ರೀ ಪುರಂದರವಿಠಲಗೆ ಪ್ರಾಣಪ್ರಿಯನು ನೀನೆ || 2 ||