Chandan Shetty Music For Raana Starring Shreya Manju | K Manju | Nanda Kishore | Vijay Karnataka

Chandan Shetty Music For Raana Starring Shreya Manju | K Manju | Nanda Kishore | Vijay Karnataka

ಕೆ. ಮಂಜು ಪುತ್ರ ಶ್ರೇಯಸ್ ನಟಿಸಿರುವ 'ರಾಣ' ಚಿತ್ರದ ಫಸ್ಟ್ ಲುಕ್ ಟೀಸರ್ ಈಚೆಗಷ್ಟೇ ರಿಲೀಸ್ ಆಗಿದೆ. 'ರಿಯಲ್ ಸ್ಟಾರ್' ಉಪೇಂದ್ರ ಟೀಸರ್ ಲಾಂಚ್ ಮಾಡಿ, ಹಾರೈಸಿದ್ದಾರೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟೀಸರ್ ಗೆ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. 'ಚಿತ್ರದ ಹಾಡುಗಳು ಚೆನ್ನಾಗಿದೆ. ಹಾಡುಗಳ ವಿಡಿಯೋ ಯಾವಾಗ ಬರುವುದೋ ಎಂದು ಕಾತುರದಿಂದ ಕಾಯುತ್ತಿದ್ದೇನೆ.. ಚಿತ್ರತಂಡಕ್ಕೆ ಹಾಗೂ ಆಡಿಯೋ ಹಕ್ಕು ಪಡೆದಿರುವ ಆನಂದ್ ಆಡಿಯೋ ಸಂಸ್ಥೆಗೆ ಧನ್ಯವಾದಗಳು' ಎಂದು ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ. 'ಚಿತ್ರೀಕರಣ ಬಹುತೇಕ ಮುಗಿದಿದೆ. ಕೋವಿಡ್ ನಿಯಮಾವಳಿಗಳು ಜಾರಿ ಇರುವುದರಿಂದ ಕೆಲವು ಜಾಗಗಳಲ್ಲಿ ಚಿತ್ರೀಕರಣ ನಡೆಸಲು ಅನುಮತಿ ಸಿಗುವುದು ತಡವಾಯಿತು. ಇಲ್ಲದಿದ್ದರೆ, ನಮ್ಮ ಚಿತ್ರ ಈ ವೇಳೆಗೆ ಸಿದ್ದವಿರುತ್ತಿತ್ತು. ಚಿತ್ರ ಉತ್ತಮವಾಗಿ ಬರಲು ಸಹಕರಿಸುತ್ತಿರುವ ಚಿತ್ರತಂಡದ ಸದಸ್ಯರಿಗೆ ನನ್ನ ಧನ್ಯವಾದ' ಎಂದರು ನಿರ್ದೇಶಕ ನಂದಕಿಶೋರ್‌. ಪೂರ್ತಿ ವಿಡಿಯೋ ಇಲ್ಲಿದೆ ನೋಡಿ. #ChandanShetty #Raana #ShreyasManju #KManju Our Website : https://Vijaykarnataka.com Facebook:   / vijaykarnataka   Twitter:   / vijaykarnataka