ಮಕರ ಸಂಕ್ರಾಂತಿ ಹಬ್ಬದ ಆಚರಣೆ ಮತ್ತು ಅದರ ಮಹತ್ವ.[Celebration of Makar Sankranti festival.]

ಮಕರ ಸಂಕ್ರಾಂತಿ ಹಬ್ಬದ ಆಚರಣೆ ಮತ್ತು ಅದರ ಮಹತ್ವ.[Celebration of Makar Sankranti festival.]

ಮಕರ ಸಂಕ್ರಾಂತಿ ಹಬ್ಬದ ಆಚರಣೆ ಮತ್ತು ಅದರ ಮಹತ್ವ.[Celebration of Makar Sankranti festival.] ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ  ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ.ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು.ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಮುಖ್ಯವಾಗಿ ಕಂಡುಬರುವುದು "ಎಳ್ಳು ಬೆಲ್ಲ". ಮನೆಯಲ್ಲಿ ಎಳ್ಳು ಬೆಲ್ಲವನ್ನು ತಯಾರಿಸಿ ಸುತ್ತಲಿನ ಮನೆಗಳಿಗೆ "ಎಳ್ಳುಹಂಚುವುದು" ಸಂಕ್ರಾಂತಿಯ ಸಂಪ್ರದಾಯ. ಎಳ್ಳಿನ ಜೊತೆಗೆ ಸಕ್ಕರೆ ಅಚ್ಚುಗಳು, ಹಣ್ಣು ಮತ್ತು ಕಬ್ಬಿನ ತುಂಡುಗಳನ್ನು ಸಹ ಬೀರುವುದುಂಟು.ಸಣ್ಣ ಸಣ್ಣ ಚೂರುಗಳಾಗಿ ಕತ್ತರಿಸಿದ ಬೆಲ್ಲ, ಒಣ ಕೊಬ್ಬರಿ, ಹುರಿಗಡಲೆ, ಸಿಪ್ಪೆ ತೆಗೆದ ಕಡಲೇಕಾಯಿ ಬೀಜ ಹಾಗೂ ಹುರಿದ ಬಿಳಿ ಎಳ್ಳನ್ನು ಸೇರಿಸಿ "ಎಳ್ಳು ಬೆಲ್ಲ" ತಯಾರಿಸಲಾಗುತ್ತದೆ.ಕರ್ನಾಟಕದ ರೈತರಿಗೆ ಸುಗ್ಗಿ ಅಥವಾ ಸುಗ್ಗಿಯ ಹಬ್ಬ ಈ ಸಂಕ್ರಾಂತಿ .ಈ ಮಂಗಳಕರ ದಿನದಂದು, ಯುವ ಹೆಣ್ಣುಮಕ್ಕಳು ಮತ್ತು ಹದಿಹರೆಯದವರು ಹೊಸ ಬಟ್ಟೆಗಳನ್ನು ಧರಿಸಿ ಒಂದು ತಟ್ಟೆಯಲ್ಲಿ ಎಳ್ಳುಬೆಲ್ಲದೊಂದಿಗೆ ಹತ್ತಿರದ ಜನರನ್ನು ಮತ್ತು ಸಂಬಂಧಿಗಳನ್ನು ಭೇಟಿಯಾಗಿ ಎಳ್ಳುಬೆಲ್ಲವನ್ನು ವಿನಿಮಯ ಮಾಡಿಕೊಳ್ಳುತ್ತಾರೆ.ನಂತರ "ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡೋಣ" ಎಂದು ಹೇಳಿಕೊಳ್ಳುತ್ತಾರೆ. ಕರ್ನಾಟಕದಲ್ಲಿ ಮಹಿಳೆಯರು ಗುಂಪು ಗುಂಪಾಗಿ ರಂಗೋಲಿಯನ್ನು ಬಿಡಿಸುವುದು ಸಂಕ್ರಾಂತಿಯ ಸಮಯದ ಮತ್ತೊಂದು ಜನಪ್ರಿಯ ಘಟನೆಯಾಗಿದೆ. ದನಕರುಗಳನ್ನು ಸಿಂಗರಿಸುವುದು ಮತ್ತು ಮೆರವಣಿಗೆ ಮಾಡುವುದು ಇನ್ನೊಂದು ಧಾರ್ಮಿಕ ಪದ್ಧತಿಯಾಗಿದೆ. ಅವುಗಳನ್ನು "ಕಿಚ್ಚು ಹಾಯಿಸುವುದು" ಹಳ್ಳಿಗಳಲ್ಲಿ ಸಾಮಾನ್ಯವಾಗಿದೆ. ತಮಿಳುನಾಡಿನಲ್ಲಿ ಈ ಹಬ್ಬವನ್ನು "ಪೊಂಗಲ್" ಎಂದು ಕರೆಯಲಾಗುತ್ತದೆ. ಇಲ್ಲಿ ಇದು ನಾಲ್ಕು ದಿನಗಳ ಹಬ್ಬ - ಈ ನಾಲ್ಕು ದಿನಗಳು ಮತ್ತು ಆ ದಿನಗಳಲ್ಲಿನ ಆಚರಣೆಗಳು ಹೀಗಿವೆ:ಪೊಂಗಲ್: ಸಮೃದ್ಧಿಯ ಸಂಕೇತವಾಗಿ ಹಾಲು-ಬೆಲ್ಲಗಳನ್ನು ಪಾತ್ರೆಯಲ್ಲಿ ಕುದಿಸಿ ಉಕ್ಕಿಸಲಾಗುತ್ತದೆಕನ್ನಡದಲ್ಲಿ ಗೂಳಿ ಕಾಳಗ ಎಂದು ಕರೆಸಿಕೊಳ್ಳುವ ಈ ಕ್ರೀಡೆ ತಮಿಳುನಾಡಿನ ಬಹುಮುಖ್ಯ ಗ್ರಾಮೀಣ ಕ್ರೀಡೆ, ಬರೀ ಕ್ರೀಡೆಯಷ್ಟೇ ಅಲ್ಲದೆ ತಮಿಳುನಾಡಿನ ಸಂಕ್ರಾಂತಿ ಹಬ್ಬದ ಒಂದು ಸಾಂಸ್ಕೃತಿಕ ಆಚರಣೆಯೂ ಕೂಡ. ಚೆನ್ನಾಗಿ ಕೊಬ್ಬಿದ ಹೋರಿಯೊಂದನ್ನು ಮೊದಲೇ ತಯಾರಾಗಿ ನಿಂತ ಜನಗಳ ಗುಂಪಿಗೆ ಹಗ್ಗವಿಲ್ಲದೆ ಬಿಡಲಾಗುತ್ತದೆ. ಗೂಳಿಯನ್ನು ಹಗ್ಗ ಬಿಚ್ಚಿ ಬಿಟ್ಟ ತಕ್ಷಣ ನೆರೆದಿರುವ ಜನರ ಹರ್ಷೋದ್ಗಾರ, ಕೇಕೆ ಮುಗಿಲು ಮುಟ್ಟುತ್ತದೆ. ಇದನ್ನು ಕಂಡ ಹೋರಿ ನಿಗದಿತ ಬಯಲಿನಲ್ಲಿ ಓಡಾಲಾರಂಭಿಸುತ್ತದೆ. ಅದರ ಮೇಲೆ ಎರಗುವ ಉತ್ಸಸಾಹಿ ತರುಣರು, ಯುವಕರು ಹೋರಿಯ ಭುಜ ಹಿಡಿದುಕೊಂಡು ಹೋರಿಯನ್ನು ಒಂದು ಕಡೆ ನಿಲ್ಲಿಸಬೇಕು. ಹಾಗೆ ನಿಲ್ಲಿಸುವಲ್ಲಿ ಯಾರು ಸಫಲರಾಗುತ್ತಾರೋ ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ಅವರಿಗೆ ಇನ್ನಿಲ್ಲದ ಮನ್ನಣೆ, ಗೌರವ ಸಿಗುತ್ತದೆ.ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಕಾಣುವ ಮಕರಜ್ಯೋತಿಗೆ ಹೆಚ್ಚಿನ ಪ್ರಾಧಾನ್ಯತೆ ಇದೆ. ಅಯ್ಯಪ್ಪ ವೃತಾಧಾರಿಗಳಾದ ಜನರು ಶಬರಿಮಲೆಗೆ ತೆರಳಿ ತಮ್ಮ ಸ್ವಾಮಿಯ ಪಾದಕ್ಕೆರಗಿ ಮಕರ ಜ್ಯೋತಿಯ ದರ್ಶನವನ್ನು ಪಡೆದರೆ ಜನ್ಮ ಸಾರ್ಥಕವಾಗುವುದೆಂಬ ನಂಬಿಕೆ ಯಿಂದಾಗಿ ಲಕ್ಷೋಪಲಕ್ಷ ಜನರು ಈ ಜ್ಯೋತಿಯ ದರ್ಶನಕ್ಕಾಗಿ ವರ್ಷಂಪ್ರತಿ ಶಬರಿಮಲೆ ಸನ್ನಿಧಾನಕ್ಕಾಗಮಿಸುತ್ತಾರೆ. "ಮಕರ ವಿಳಕ್ಕು"ಎಂದು ಕರೆಯಲ್ಪಡುವ ಈ ಜ್ಯೋತಿಯು ಶಬರಿಮಲೆಯ ಬೆಟ್ಟದಿಂದ ಮೂರು ಬಾರಿ ಗೋಚರವಾಗುತ್ತದೆ.ಗುಜರಾತ್ ಮತ್ತು ಮಹಾರಾಷ್ಟ್ರಗಳಲ್ಲಿ ಸಂಕ್ರಾಂತಿಯ ದಿನದಂದು ಗಾಳಿಪಟಗಳನ್ನು ಹಾರಿಬಿಡುವ ಸಂಪ್ರದಾಯವುಂಟು. ಮಹಾರಾಷ್ಟ್ರದಲ್ಲಿಯೂ, ಎಳ್ಳು ಮತ್ತು ಸಕ್ಕರೆಯ ಕುಸುರಿಕಾಳನ್ನು ಬಂಧು ಮಿತ್ರರಿಗೆ ಹಂಚುವ ರೂಢಿ ಇದೆ. ಪ್ರಮುಖವಾಗಿ ಅವರು, ಎಳ್ಳಿನ ಉಂಡೆ ಗಳನ್ನು ಹಂಚುತ್ತಾರೆ. ಅದಕ್ಕೆ ಅವರು ಲಡ್ಡು ಎನ್ನುತ್ತಾರೆ. ಕರ್ನಾಟಕದ ಸಂಪ್ರದಾಯದ ತರಹ ಬಿಡಿ ಕಾಳುಗಳನ್ನು ಹಂಚುವ ಪದ್ಧತಿಯಿಲ್ಲ. ಎಳ್ಳುಂಡೆಕೊಡುವಾಗ ತಪ್ಪದೆ, " ತಿಳ್ಗುಳ್ ಘ್ಯಾ, ಅಣಿ ಗೋಡ್ ಗೋಡ್ ಬೋಲ" (ಅಂದರೆ ಎಳ್ಳು ಬೆಲ್ಲ ತೆಗೆದುಕೊಂಡು ಒಳ್ಳೊಳ್ಳೆಯ ಮಾತಾಡಿ) ಎನ್ನುವ ಮಾತು ಹೇಳುವುದನ್ನು ಮರೆಯುವುದಿಲ್ಲ.