DEVARA NAAMA : BHAGYADA LAKSHMI BARAMMA : ಭಾಗ್ಯದ ಲಕ್ಷ್ಮಿ ಬಾರಮ್ಮ : Carnatic Junior Grade.

DEVARA NAAMA : BHAGYADA LAKSHMI BARAMMA : ಭಾಗ್ಯದ ಲಕ್ಷ್ಮಿ ಬಾರಮ್ಮ : Carnatic Junior Grade.

DEVARA NAAMA : BHAGYADA LAKSHMI BARAMMA : ಭಾಗ್ಯದ ಲಕ್ಷ್ಮಿ ಬಾರಮ್ಮ : Carnatic Junior Grade. LYRICS : SHRI PURANDARA DASARU GURUJI : VIDWAN SHRI SHIVALINGA SHETTY.GAARU, TUMKUR, KARNATAKA, INDIA. ಭಾಗ್ಯದ ಲಕ್ಷ್ಮೀ ಬಾರಮ್ಮ ನಮ್ಮಮ್ಮ ನೀ | ಸೌಭಾಗ್ಯದ ಲಕ್ಷ್ಮೀ ಬಾರಮ್ಮ || ಪ || ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುತ ಗೆಜ್ಜೆಯ ಕಾಲಿನ ನಾದವ ತೋರುತ | ಸಜ್ಜನ ಸಾಧು ಪೂಜೆಯ ವೇಳೆಗೆ ಮಜ್ಜಿಗೆಯೊಳಗಿನ ಬೆಣ್ಣೆಯಂತೆ || ೧ || ಕನಕವೃಷ್ಟಿಯ ಕರೆಯುತ ಬಾರೆ ಮನ ಕಾಮನೆಯ ಸಿದ್ಧಿಯ ತೋರೆ | ದಿನಕರ ಕೋಟಿ ತೇಜದಿ ಹೊಳೆಯುವ ಜನಕರಾಯನ ಕುಮಾರಿ ಬೇಗ || ೨ || ಅತ್ತಿತ್ತಲಗದೆ ಭಕ್ತರ ಮನೆಯಲಿ ನಿತ್ಯ ಮಹೋತ್ಸವ ನಿತ್ಯ ಸುಮಂಗಲ | ಸತ್ಯದಿ ತೋರುವ ಸಾಧು ಸಜ್ಜನರ ಚಿತ್ತದಿ ಹೊಳೆಯುವ ಪುತ್ಥಳಿ ಬೊಂಬೆ || ೩ || ಸಂಖ್ಯೆಯಿಲ್ಲದ ಭಾಗ್ಯವ ಕೊಟ್ಟು ಕಂಕಣ ಕೈಯ ತಿರುವುತ ಬಾರೆ | ಕುಂಕುಮಾಂಕಿತೆ ಪಂಕಜಲೋಚನೆ ವೆಂಕಟರಮಣನ ಬಿಂಕದ ರಾಣಿ || ೪ || ಸಕ್ಕರೆ ತುಪ್ಪದ ಕಾಲುವೆ ಹರಿಸಿ ಶುಕ್ರವಾರದ ಪೂಜೆಯ ವೇಳೆಗೆ | ಅಕ್ಕರೆಯುಳ್ಳ ಅಳಗಿರಿ ರಂಗನ ಚೊಕ್ಕ ಪುರಂದರ ವಿಠ್ಠಲನ ರಾಣಿ || ೫ ||